ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. 11 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಚನ್ನಾಪುರದಲ್ಲಿ ನಡೆದಿದೆ.
ಸಚಿನ್ (11) ಮೃತ ಬಾಲಕ. ಚನ್ನಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ. ಬಾಲಕ ಸಚಿನ್ ಗೆ ನಿನ್ನೆಯಿಂದ ಎದೆ ನೋವು ಕಾಣಿಸಿಕೊಂಡಿತ್ತು. ಎದೆ ನೋವು ಹಿನ್ನೆಲೆಯಲ್ಲಿ ಇಂದು ಶಾಲೆಗೆ ಹೋಗಿರಲಿಲ್ಲ.
ಇದೀಗ ಬಾಲಕ ಮನೆಯಲ್ಲಿದ್ದಾಗಲೇ ಹೃದಯಾಘಾತವಾಗಿದ್ದು, ಕೊನೆಯುಸಿರೆಳೆದಿದ್ದಾನೆ. ಪರೀಕ್ಷೆ ಮಾಡಿದ ವೈದ್ಯರು ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ದೃಢಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ