
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. 7ನೇ ತರಗತಿ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಕೆಸವಳಲು ಜೋಗಣ್ಣನಕೆರೆಯಲ್ಲಿ ಈ ದುರಂತ ಸಂಭವಿಸಿದ್ದು, 7ನೇ ತರಗತಿ ವಿದ್ಯಾರ್ಥಿನಿ ಇಂದು ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ.
ಸೃಷ್ಟಿ ಮೃತ ವಿದ್ಯಾರ್ಥಿನಿ. ಶಾಲೆಗೆ ತೆರಳುತ್ತಿದ್ದಾಗ ಏಕಾಏಕಿ ವಿದ್ಯಾರ್ಥಿನಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಾಳೆ. ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ