Kannada NewsKarnataka NewsLatest

*ಇದ್ದಕ್ಕಿದ್ದಂತೆ ಕುಸಿದು ಬಿದ್ದ ASI: ಹೃದಯಾಘಾತದಿಂದ ಸಾವು*

ಪ್ರಹತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಮತ್ತೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಡ್ಯೂಟಿ ಮುಗಿಸಿಕೊಂಡು ಮನೆಗೆ ವಾಪಾಸ್ ಆಗಿದ್ದ ಎಎಸ್ಐ ಓರ್ವರು ಆಗುತ್ತಿದ್ದಾಗ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಾಮರಾಜನಗರದಲ್ಲಿ ಈ ಘಟನೆ ನಡೆದಿದೆ. ಸಂತೆಮಾರನಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ನಾಗನಾಯಕ ಹೃದಯಾಘಾತಕ್ಕೆ ಬಲಿಯಾದವರು. ರಾತ್ರಿ ಡ್ಯೂಟಿ ಮುಗಿಸಿ ಮುಂಜಾನೆ ಮನೆಗೆ ಬಂದವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.

ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆ ಮಾರ್ಗದಲ್ಲೇ ಕೊನೆಯುಸಿರೆಳೆದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button