
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮಳೆ ವೇಗ ಪಡೆದುಕೊಂಡಿದ್ದು ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಇಂದು ಹಲವು ಜಿಲ್ಲೆಗೆ ಯೆಲ್ಲೋ ಮತ್ತು ರೆಡ್ ಅಲರ್ಟ್ಗಳನ್ನು ಘೋಷಿಸಿದೆ.
ಕರಾವಳಿಯಲ್ಲಿ ಜುಲೈ 3 ಮತ್ತು 4 ರಂದು ಆರೆಂಜ್ ಅಲರ್ಟ್ ಇರಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡಕ್ಕೆ ಜುಲೈ 5 ರಿಂದ 7 ರ ಅವಧಿಯಲ್ಲಿ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ ಮೊದಲ ವಾರದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




