Kannada NewsKarnataka NewsLatest

*ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಹೃದಯಾಘಾತ: ಕ್ಷೇತ್ರ ಶಿಕ್ಷಣಾಧಿಕಾರಿ ಸಾವು*

ಪ್ರಗತಿವಾಹಿನಿ ಸುದ್ದಿ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಪಿ.ಜೆ.ಆನಂದ್ ಹೃದಯಾಘಾತಕ್ಕೆ ಬಲಿಯಾದ ಶಿಕ್ಷಣಾಧಿಕಾರಿ. ಮೈಸೂರಿನಿಂದ ಕೊಡಗು ಜಿಲ್ಲೆಯ ವಿರಾಜಪೇಟೆಗೆ ತೆರಳಲು ಬಸ್ ಹತ್ತಿದ್ದರು. ಇಲವಾಲಬಳಿ ಬಸ್ ಬರುತ್ತಿದ್ದಂತೆ ಪಿ.ಜೆ.ಆನಂದ್ ಅವರಿಗೆ ಹೃದಯಾಘಾತವಾಗಿದೆ.

ತಕ್ಷಣ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆಯೇ ಆನಂದ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button