Karnataka News

*ಬೈಕ್ ಓಡಿಸುತ್ತಿದ್ದಾಗಲೇ ಹೃದಯಾಘಾತದಿಂದ ಸವಾರ ಸಾವು*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ವಾಲಿ ಬಾಲ್ ಆಡುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದ್ದ ಬೆನ್ನಲ್ಲೇ ಇದೀಗ ಬೈಕ್ ಓಡಿಸುತ್ತಿದ್ದಾಗಲೇ ಬೈಕ್ ಸವಾರನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಬೈಕ್ ಸವಾರ ಹೃದಯಾಘಾತದಿಂದ ಬೈಕ್ ನಿಂದ ಕೆಲಗೆ ಬೀಳುತ್ತಿರುವ ಹಾಗೂ ಬೈಕ್ ತಡೆಗೋಡೆಗೆ ಡಿಕ್ಕಿ ಹೊಡೆಯುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಚಾಮರಾಜನಗರ ತಾಲೂಕಿನ ನಂಜೆದೇವರಪುರದ ರವಿ ಮೃತ ವ್ಯಕ್ತಿ. ಕುವೆಂಪುನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button