*ಬೈಕ್ ಓಡಿಸುತ್ತಿದ್ದಾಗಲೇ ಹೃದಯಾಘಾತದಿಂದ ಸವಾರ ಸಾವು*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ವಾಲಿ ಬಾಲ್ ಆಡುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದ್ದ ಬೆನ್ನಲ್ಲೇ ಇದೀಗ ಬೈಕ್ ಓಡಿಸುತ್ತಿದ್ದಾಗಲೇ ಬೈಕ್ ಸವಾರನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಬೈಕ್ ಸವಾರ ಹೃದಯಾಘಾತದಿಂದ ಬೈಕ್ ನಿಂದ ಕೆಲಗೆ ಬೀಳುತ್ತಿರುವ ಹಾಗೂ ಬೈಕ್ ತಡೆಗೋಡೆಗೆ ಡಿಕ್ಕಿ ಹೊಡೆಯುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಾಮರಾಜನಗರ ತಾಲೂಕಿನ ನಂಜೆದೇವರಪುರದ ರವಿ ಮೃತ ವ್ಯಕ್ತಿ. … Continue reading *ಬೈಕ್ ಓಡಿಸುತ್ತಿದ್ದಾಗಲೇ ಹೃದಯಾಘಾತದಿಂದ ಸವಾರ ಸಾವು*