ಪ್ರಗತಿವಾಹಿನಿ ಸುದ್ದಿ: ಬದುಕಿನುದ್ದಕ್ಕೂ ಜೊತೆಯಾಗಿದ್ದ ದಂಪತಿ ಸಾವಿನಲ್ಲಿಯೂ ಒಂದಾಗಿರುವ ಘಟನೆ ಚಿತ್ರದುರ್ಗ ನಗರದ ಕಳಗೋಟೆ ಬಡಾವಣೆಯಲ್ಲಿ ನಡೆದಿದೆ. ಪತಿ-ಪತ್ನಿ ಇಬ್ಬರೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ನಿವೃತ್ತ ಲೈಬ್ರರಿಯನ್ ಆಗಿದ್ದ ಓಂಕಾರಮೂರ್ತಿ ಇಂದು ಬೆಳಿಗ್ಗೆ ಹೃದಯಾಘಾತಕ್ಕೀಡಾಗಿದ್ದರು. ತಕ್ಷಣ ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಪತಿಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ಕೇಳಿ ಮನೆಯಲ್ಲಿದ್ದ ಪತ್ನಿ ದಾಕ್ಷಾಯಿಣಿಗೂ ಹೃದಾಯಾಘಾತವಾಗಿದ್ದು, ಸ್ಥಳದಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.
ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓಂಕಾರಮೂರ್ತಿ ಕೂಡ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಎಸ್.ಜೆ.ಎಂ ವಿದ್ಯಾಪೀಠದಲ್ಲಿ ಮುಖ್ಯ ಗ್ರಂಥಪಾಲಕರಾಗಿ 30 ವರ್ಷಗಳ ಕಾಲ ಓಂಕಾರಮೂರ್ತಿ ಸೇವೆ ಸಲ್ಲಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ