
ಪ್ರಗತಿವಾಹಿನಿ ಸುದ್ದಿ: ನಾಳೆ ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದೆ. ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿಯಿವೆ. ಈ ನಡಿವೆ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದಿದೆ.
ಮುಧೋಳ ಬಸ್ ನಿಲ್ದಾಣದ ಬಳಿಯೇ ಈ ದುರಂತ ಸಂಭವಿಸಿದ್ದು, ಗೋವಿಂದಪ್ಪ ಸಿದ್ದಾಪುರ ಮೃತ ಚುನಾವಣಾ ಸಿಬ್ಬಂದಿ. ಮುಧೋಳದ ಬಿದರಿ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದ ಗೋವಿಂದಪ್ಪ ಸಿದ್ದಾಪುರ ಅವರನ್ನು ಚುನಾವಣಾ ಕರ್ತವ್ಯಕ್ಕೆ ಮೈಗೂರು ಮತಗಟ್ಟೆಗೆ ನೇಮಿಸಲಾಗಿತ್ತು.
ಮೈಗೂರು ಪ್ರಾಥಮಿಕ ಶಾಲೆಯ ಮತಗಟ್ಟೆಗೆ ತೆರಳುತ್ತಿದ್ದಾಗ ಹೃದಯಾಘಾತದಿಂದ ಗೋವಿಂದಪ್ಪ ಸಿದ್ದಪುರ ಸಾವನ್ನಪ್ಪಿದ್ದರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ