*ಪತ್ನಿ ಮೇಲೆ ಹಲ್ಲೆ ಮಾಡುತ್ತಿದ್ದ ಘಟನೆ ಕಂಡು ಹೃದಯಾಘಾತದಿಂದ ಸಾವನ್ನಪ್ಪಿದ ಪತಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದುಷ್ಕರ್ಮಿಯೊಬ್ಬ ತನ್ನ ಪತ್ನಿ ಮೇಲೆ ಹಲ್ಲೆ ಮಾಡುತ್ತಿರುವುದನ್ನು ಕಂಡು ಹೃದಯಾಘಾತಕ್ಕೊಳಗಾದ ಪತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಚಂದ್ರಾಲೇಔಟ್ ನ ಗಂಗೊಂಡನಹಳ್ಳಿಯಲ್ಲಿ ನಡೆದಿದೆ.
ಮುದಾಸಿರ್ ಖಾನ್ ಮೃತ ವ್ಯಕ್ತಿ. ಈ ಬಗ್ಗೆ ಮುದಾಸಿರ್ ಪತ್ನಿ ಚಂದ್ರಾಲೇಔಟ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವಾಹಿದ್ ಅಹ್ಮದ್ ಎಂಬಾತ ನನ್ನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ. ಹಲ್ಲೆಯನ್ನು ನೋಡಿದ ತನ್ನ ಪತಿ ಮುದಾಸಿರ್ ಗೆ ಹೃದಯಾಘಾತವಾಗಿದ್ದು, ಅಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ವಾಹಿದ್ ಹಾಗೂ ಆತನ ಸಹೋದರ ಮತಿನ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಾಹಿದ್ ಮಹಿಳೆ ಬಗ್ಗೆ ಕೆಟ್ಟದಾಗಿ ಹೇಳಿಕೊಂಡು ಓಡಾಡುತ್ತಿದ್ದನಂತೆ. ಈ ಬಗ್ಗೆ ಮಹಿಳೆ ಹಾಗೂ ಆಕೆಯ ಪತಿ ಮುದಾಸಿರ್ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ವಾಹಿದ್ ಹಾಗೂ ಆತನ ಸಹೋದರ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪತ್ನಿ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಕಂಡು ಪತಿ ಮುದಾಸಿರ್ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ