ಪುನಿತ್ ರಾಜ್ ಕುಮಾರ ಸ್ಥಿತಿ ಚಿಂತಾಜನಕ; ಸಿಎಂ ಸೇರಿ ಹಲವು ಗಣ್ಯರು ಆಸ್ಪತ್ರೆಗೆ ದೌಡು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಖ್ಯಾತ ನಟ ಪುನಿತ್ ರಾಜ್ ಕುಮಾರ ಆರೋಗ್ಯ ಚಿಂತಾಜನಕವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವಾರು ಗಣ್ಯರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಆಸ್ಪತ್ರೆ ಹಾಗೂ ಅವರ ಸದಾಶಿವನಗರದ ಮನೆಯ ಸುತ್ತ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇಂದು ಬೆಳಗ್ಗೆ ಜಿಮ್ ಮಾಡುವ ಸಂದರ್ಭದಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿದೆ.

ಇನ್ನು ಕೆಲವೇ ಕ್ಷಣಗಳಲ್ಲಿ ಆಸ್ಪತ್ರೆಯಿಂದ ಹೆಲ್ತ್ ಬುಲಿಟನ್ ಬಿಡುಗಡೆಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿಗಳೂ ಪುನಿತ್ ಆರೋಗ್ಯದ ಮಾಹಿತಿ ನೀಡಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಹ ಆಸ್ಪತ್ರೆಗೆ ಧಾವಿಸಿದ್ದಾರೆ.

Home add -Advt

ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ

Related Articles

Back to top button