LatestUncategorized

*ಮತದಾನ ಮಾಡಿ ಹೊರ ಬಂದ ವ್ಯಕ್ತಿ; ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ; ಬೇಲೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಿ ಹೊರ ಬಮ್ದ ವ್ಯಕ್ತಿ ಮತಗಟ್ಟೆ ಆವರಣದಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಗ್ರಾಮದಲ್ಲಿ ನಡೆದಿದೆ.

49 ವರ್ಷದ ಜಯಣ್ಣ ಮೃತರು. ಮತದಾನ ಮಾಡಿ ಹೊರ ಬರುತ್ತಿದ್ದಂತೆ ಜಯಣ್ಣ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಮತಗಟ್ಟೆ ಆವರಣದಲ್ಲಿಯೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಇನ್ನೊಂದೆಡೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯರಝರ್ವಿ ಗ್ರಾಮದ ಮತಗಟ್ಟೆಯಲ್ಲಿಯೂ ಇಂತದ್ದೇ ದುರಂತ ಸಂಭವಿಸಿದ್ದು, ಮತದಾನ ಮಾಡಲೆಂದು ಆಗಮಿಸಿದ್ದ ವೃದ್ಧೆ ಲೋ ಬಿಪಿಯಿಂದಾಗಿ ಕುಸಿದು ಬಿದ್ದು ಮತಗಟ್ಟೆಯಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

https://pragati.taskdun.com/belagavi-an-elderly-woman-died-in-the-polling-booth/


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button