Kannada NewsKarnataka NewsLatest

*ಹೃದಯಾಘಾತದಿಂದ ನರ್ಸಿಂಗ್ ವಿದ್ಯಾರ್ಥಿನಿ ಸಾವು*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಲೋ ಬಿಪಿಯಿಂದ ಹೃದಯಾಘಾತವಾಗಿ ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿಯ ನೆರಿಯ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. 19 ವರ್ಷದ ಸುಮಾ ಮೃತ ವಿದ್ಯಾರ್ಥಿನಿ. ಅನಾರೋಗ್ಯದ ಕಾರಣಕ್ಕೆ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ಸುಮಾ ಲೋ ಬಿಪಿಯಿಂದ ಹೃದಯಾಘತಕ್ಕೊಳಗಾಗಿ ಸಾವನ್ನಪ್ಪಿದ್ದಾಳೆ.

Home add -Advt

ಸುಮಾ ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಳು. ಆಗಸ್ಟ್ 9ರಂದು ಅನಾರೋಗ್ಯದಿಂದ ಆಸ್ಪತ್ರೆಗೆದಾಖಲಾಗಿದ್ದ ಸುಮಾ, ಚಿಕಿತ್ಸೆ ಬಳಿಕ ಮನೆಗೆ ವಾಪಸ್ ಆಗಿದ್ದಳು. ಆದರೆ ಆಗಸ್ಟ್ 13ರಂದು ಮತ್ತೆ ಅನಾರೋಗ್ಯಕ್ಕೀಡಾಗಿದ್ದರಿಂದ ಮಂಗಳೂರು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆಯೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.

Related Articles

Back to top button