ಪ್ರಗತಿವಾಹಿನಿ ಸುದ್ದಿ: ಕಾಲೇಜಿನ ಮುಂದೆಯೇ ಪಿಯುಸಿ ವಿದ್ಯಾರ್ಥಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುವಕೂರು ಜಿಲ್ಲೆಯ ಗುಬ್ಬಿ ತಲೂಕಿನ ನಿಟ್ಟೂರಿನಲ್ಲಿ ನಡೆದಿದೆ.
17 ವರ್ಷ ಶಮಂತ್ ಮೃತ ವಿದ್ಯಾರ್ಥಿ. ನಿಟ್ಟೂರು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಕಾಲೇಜಿನ ಮುಂದೆ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ಶಮಂತ್, ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆಯೇ ಶಮಂತ್ ಸಾವನ್ನಪ್ಪಿದ್ದಾನೆ.
ಗುಬ್ಬಿ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ