Kannada NewsKarnataka NewsLatest

*ಆಸ್ಪತ್ರೆ ಮೆಟ್ಟಿಲು ಏರುವಾಗಲೇ ಹೃದಯಾಘಾತ: ಪುರಸಭೆ ಅಧ್ಯಕ್ಷ ಸಾವು*

ಪ್ರಗತಿವಾಹಿನಿ ಸುದ್ದಿ: ಆರೋಗ್ಯ ಸಮಸ್ಯೆಗೆ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ ಪುರಸಭೆ ಅಧ್ಯಕ್ಷ ಆಸ್ಪತ್ರೆ ಮೆಟ್ಟಿಲು ಹತ್ತುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಹನುಮಂತಪ್ಪ ಮೃತ ಪುರಸಭೆ ಅಧ್ಯಕ್ಷ. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಬೈಕ್ ನಲ್ಲಿ ಆಸ್ಪತ್ರೆಗೆ ಆಗಮಿಸಿದ್ದರು.

ಆಸ್ಪತ್ರೆ ಮೆಟ್ಟಿಲು ಹತ್ತುವಾಗಲೇ ಎದೆನೋವಿನಿಂದ ಕುಸಿದು ಬಿದ್ದ ಹನುಮಂತಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ.


Related Articles

Back to top button