
ಪ್ರಗತಿವಾಹಿನಿ ಸುದ್ದಿ: ತೀವ್ರವಾದ ಎದೆ ನೋವು ಕಾಣಿಸಿಕೊಂಡ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಆಸ್ಪತ್ರೆಗೆ ತೆರಳುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಸ್ನೇಹಿತನ ಜೊತೆ ಬೈಕ್ ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ. ಕೊರೇಶ ಸಿದ್ದಣ್ಣ (17) ಮೃತ ವಿದ್ಯಾರ್ಥಿ. ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ನಿವಾಸಿ.
ಕಲಬುರಗಿಯಲ್ಲಿ ಪ್ಯಾರಾಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ. ಇದ್ದಕ್ಕಿದ್ದಂತೆ ಎದೆನೋವು ಕಣಿಸಿಕೊಂಡಿದೆ. ಸ್ನೇಹಿತನ ಜೊತೆ ತಕ್ಷಣ ಆಸ್ಪತ್ರೆಗೆ ಹೊರಟಿದ್ದ. ಈ ವೇಳೆ ಮಾರ್ಗ ಮಧ್ಯೆಯೇ ಕೊರೇಶ ಕೊನೆಯುಸಿರೆಳೆದಿದ್ದಾನೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ