Karnataka News

*ಪ್ರವಾಸಿಗರನ್ನು ಕರೆತಂದಿದ್ದ ಟಿಟಿ ಚಾಲಕ ಏಕಾಏಕಿ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂನಿಂದ ಚಿಕ್ಕಮಗಳೂರಿಗೆ ಪ್ರವಾಸಿಗರನ್ನು ಕರೆತಂದಿದ್ದ ಟಿಟಿ ವಾಹನ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಅವಿನಾಶ್ (25) ಮೃತ ಚಾಲಕ. ಬೆಂಗಳೂರಿನ ಸೋಮನಹಳ್ಳಿ ಮೂಲದವರಾಗಿದ್ದ ಅವಿನಾಶ್ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಎರಡು ವರ್ಷದ ಮಗು ಕೂಡ ಇದೆ.

ಬೆಂಗಳೂರಿನಿಂದ ಪ್ರವಾಸಿಗರನ್ನು ಟಿಟಿಯಲ್ಲಿ ಚಿಕ್ಕಮಗಳೂರಿಗೆ ಕರೆತಂದಿದ್ದ ಅವಿನಾಶ್, ಪ್ರವಾಸಿಗರನ್ನು ಹೋಂ ಸ್ಟೇ ಬಳಿ ಬಿಟ್ಟು ತೆರಳಿದ್ದರು. ಈ ವೇಳೆ ಏಕಾಏಕಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲೇ ಕೊನೆಯುಸಿರೆಳೆದಿದ್ದರು.

ಚಿಕ್ಕಮಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt

Related Articles

Back to top button