ಭಾರಿ ಭೂ ಕುಸಿತ: ಪುಣಾ ಬೆಂಗಳೂರು ಹೈವೇ ಬಂದ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಭಾರೀ ಪ್ರಮಾಣದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ಭೂ ಕುಸಿತದಿಂದಾಗಿ ಪುಣಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್ ಮಾಡಲಾಗಿದೆ.
ಬೆಳಗಾವಿ -ಕೊಲ್ಹಾಪುರ ಮಧ್ಯೆ ಕೊಗನೋಳಿ ಬಳಿ ಹೆದ್ದಾರಿಯಲ್ಲಿ ಭೂ ಕುಸಿತ ಉಂಟಾಗಿದೆ. ಹಾಗಾಗಿ ಬೆಳಗಾವಿ -ಕೊಲ್ಹಾಪುರ ಮಧ್ಯೆ ಸಂಚಾರ ಸ್ಥಿಗತಗೊಳಿಸಲಾಗಿದೆ. ಮುಂದಿನ ಸೂಚನೆಯವರೆಗೆ ಯಾರೂ ಸಂಚಾರ ಕೈಗೊಳ್ಳದಂತೆ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಸೂಚಿಸಿದ್ದಾರೆ.
ಈ ಹೆದ್ದಾರಿಯಲ್ಲಿ ಇಂದು ಬೆಳಗ್ಗೆಯಿಂದಲೇ ಅಲ್ಲಲ್ಲಿ ಗುಡ್ಡ ಕುಸಿತ, ಭಾರಿ ಪ್ರಮಾಣದಲ್ಲಿ ನೀರು ಶೇಖರಣೆಯಿಂದಾಗಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ರಸ್ತೆ ಪಕ್ಕದಲ್ಲಿ ಕೆರೆಯಂತಹ ದೃಷ್ಯ ನಿರ್ಮಾಣವಾಗಿದೆ. ರಸ್ತೆಯಲ್ಲಿ ಸಂಚರಿಸುವುದೇ ಭಾರಿ ಭಯಾನಕವಾಗಿತ್ತು.
ಈಗ ಸ್ವಲ್ಪ ಹೊತ್ತಿನ ಮುಂಚೆ ಕೊಗನೋಳಿ ಬಳಿ ಹೆದ್ದಾರಿಯಲ್ಲಿ ಭಾರಿ ಪ್ರಮಾಣದ ಭೂ ಕುಸಿತ ಉಂಟಾಗಿ ರಸ್ತೆ ಇಬ್ಬಾಗವಾಗಿದೆ. ಇಲ್ಲಿ ಈಗ ಭಾರಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
ರಸ್ತೆ ಸಂಚಾರ ಸಂಪೂರ್ಣ ನಿಲ್ಲಿಸಲಾಗಿದೆ. ಯಾವುದೇ ವಾಹನ ಸಂಚಾರ ಸಾಧ್ಯವಿಲ್ಲ. ಕೊಲ್ಹಾಪುರಕ್ಕೆ ತೆರಳುವವರು, ಅಲ್ಲಿಂದ ಬೆಳಗಾವಿಯತ್ತ ಬರುವವರು ಪ್ರವಾಸ ನಿಲ್ಲಿಸುವುದು ಅನಿವಾರ್ಯವಾಗಿದೆ.
ಇದನ್ನೂ ಓದಿ – ಪ್ರವಾಹಕ್ಕೆ ಸಿಲುಕಿದ್ದ ಜಾನುವಾರುಗಳ ರಕ್ಷಣೆಗೆ ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು
ಪ್ರವಾಹ ಮುನ್ನೆಚ್ಚರಿಕೆ ಕ್ರಮ; ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ