Belagavi NewsBelgaum NewsKannada NewsKarnataka News

*ಈ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. 

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. 

Home add -Advt

ಹಾಗೇ ಇದರ ಜೊತೆಗೆ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಮತ್ತೆ ಮಳೆ ಚುರುಕಾಗುವ ಸಾಧ್ಯತೆ ದಟ್ಟವಾಗಿದೆ. ಹಾಗೇ ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲೂ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನು ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್ ಮತ್ತು ಬೆಳಗಾವಿ ಸೇರಿದಂತೆ ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.

ದಕ್ಷಿಣ ಭಾಗದಲ್ಲಿ ರಾಮನಗರ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ & ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Related Articles

Back to top button