
ಡಾ.ಸೋನಾಲಿ ಸರ್ನೋಬತ್ ನೇತೃತ್ವ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಖಾನಾಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರೈತರ ಬೆಳೆಗಳು ಕೊಚ್ಚಿ ಹೊಗುತ್ತಿದ್ದು ಸೂಕ್ತ ಪರಿಹಾರ ನೀಡಬೇಕೆಂದು ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಶನಿವಾರ ಮನವಿ ಸಲ್ಲಿಸಲಾಯಿತು.
ಬೆಳಗಾವಿ ಹಾಗೂ ಖಾನಾಪುರ ತಾಲೂಕಿನಲ್ಲಿ ಅಕಾಲಿಕ ಮಳೆಯಿಂದ ಭತ್ತ ಹಾಗೂ ಕಬ್ಬು ಬೆಳೆಗಳು ಅಪಾರ ನಷ್ಟವಾಗಿದೆ. ನಿನ್ನೆ ನಂದಗಡದಲ್ಲಿ ಬೆಳೆ ನಷ್ಟದಿಂದ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನೆಲ್ಲ ಉಲ್ಲೇಖಿಸಿ ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ, ತಕ್ಷಣ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.
ಕಕ್ಕೇರಿ, ಇಟಗಿ, ಪಾರಿಶ್ವಾಡದ ರೈತರು ಉಪಸ್ಥಿತರಿದ್ದರು. ಬಿಜೆಪಿ ಕಾರ್ಯಕರ್ತರಾದ ಈಶ್ವರ ಸಾಣಿಕೋಪ್, ಬಸವರಾಜ ಕಡೇಮನಿ, ಬಾಳೇಶ್ ಚವ್ಹಾಣ್, ರುದ್ರಗೌಡ ಪಾಟೀಲ್ ಮೊದಲದವರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಮೊದಲ ನಾಮಪತ್ರ ಸಲ್ಲಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ