Kannada NewsKarnataka NewsNational

ನಾಳೆ ವಿವಿಧಡೆ ಭಾರಿ ಮಳೆ: 20 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ಮುಂಗಾರು ಪ್ರವೇಶ ಆರಂಭ ಆಗಿದ್ದು, ರಾಜ್ಯದ ವಿವಿಧೆಡೆ ಭಾನುವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಹಾಗಾಗಿ 20 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಘೋಷಣೆ ಮಾಡಿದೆ. 

ಕೇರಳ ಪ್ರವೇಶಿಸಿರುವ ನೈರುತ್ಯ ಮುಂಗಾರು, ಮುಂದಿನ ಎರಡರಿಂದ ಮೂರು ದಿನಗಳಲ್ಲಿ ಕರ್ನಾಟಕಕ್ಕೆ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

Home add -Advt

ತುಮಕೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಯಚೂರು, ಕೊಪ್ಪಳ, ಗದಗ, ಹಾವೇರಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ಹಾಗೂ ಬೆಂಗಳೂರು ನಗರಕ್ಕೆ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ. ಈ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಹಾಗೂ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಮುಂದಿನ ಎರಡು ದಿನ ರಾಜ್ಯದಾದ್ಯಂತ ಗರಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಸಾಧಾರಣ ಮಳೆ ಸುರಿಯುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

Related Articles

Back to top button