*ಭಾರಿ ಮಳೆ: ಇಂದಿನಿಂದ ಮೂರು ದಿನ ಎಚ್ಚರ ವಹಿಸಿ*

ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿರುವ ಹಿನ್ನೆಯಲ್ಲಿ ಇಂದಿನಿಂದ ಸೆ. 6 ರವರೆಗೂ ಭಾರಿ ಮಳೆಯಾಗಲಿದ್ದು, ಬಳಿಕ ಮಳೆ ಪ್ರಮಾಣ ಸ್ವಲ್ಪ ತಗ್ಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇನ್ನು ಈ ಮೂರು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಅಲರ್ಟ್ ಕೂಡ ಘೋಷಣೆ ಆಗಿದೆ. ಹಾಗಾದ್ರೆ ಹೆಚ್ಚು ಮಳೆ ಯಾವ ಜಿಲ್ಲೆಯಲ್ಲಿ ಆಗಲಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ..
ಪ್ರಮುಖವಾಗಿ ತುಮಕೂರು, ರಾಮನಗರ, ಮೈಸೂರು, ಮಂಡ್ಯ ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಬೀದರ್, ಯಾದಗಿರಿ, ಕಲಬುರಗಿ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ ಮಳೆಯಾಗಲಿದೆ.
ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಹಾಗೂ ಬಿರುಗಾಳಿ ಸಹಿತ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇನ್ನು ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ವಿಶೇಷ ಎಚ್ಚರಿಕೆ ಜಾರಿಗೊಳಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರೀ ಮತ್ತು ಅತಿ ಭಾರೀ ಮಳೆಗೆ ಸಂಬಂಧಿಸಿದಂತೆ ಆರೇಂಜ್ ಅಲರ್ಟ್ ಜಾರಿ ಮಾಡಲಾಗಿದೆ.
ಹಾಗೆಯೇ ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಭಾರೀ ಮಳೆಯ ಸಾಧ್ಯತೆ ಇದೆ.
ಇವತ್ತು ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ತಗ್ಗಲಿದೆ ಮಳೆ..!
ಇನ್ನು ಸೆಪ್ಟೆಂಬರ್ 2ನೇ ವಾರದಿಂದ ಮಳೆ ಕಡಿಮೆಯಾಗಲಿದೆ. ಮುಂಗಾರು ಕ್ಷೀಣಿಸಿದ್ದು, ವಾಯುಭಾರ ಕುಸಿತದಿಂದ ಮಳೆ ಆಗುತ್ತಿದೆ. ಕ್ರಮೇಣ ಮಳೆ ಕಡಿಮೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸೆಪ್ಟೆಂಬರ್ ಅಂತ್ಯಕ್ಕೆ ಮತ್ತೆ ಮಳೆ ಬೀಳುವ ಸಾಧ್ಯತೆಯೂ ದಟ್ಟವಾಗಿದೆ.