Belagavi NewsBelgaum NewsKannada NewsKarnataka News

*ಮುಂದು ವರೆದ ಮಳೆ ಅಬ್ಬರ: ಹಲವಡೆ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದು ವರೆದಿದ್ದು, ಹಲವು ಜಿಲ್ಲೆಯಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚುರುಕು ಪಡೆದಿದ್ದು, ಕಳೆದ ಎರಡು ದಿನಗಳಿಂದ ಹಲವೆಡೆ ಮಳೆಯಾಗುತ್ತಿದೆ. ಕರಾವಳಿ ಪ್ರದೇಶಗಳಲ್ಲಿ ಅಕ್ಟೋಬರ್ 12ರವರೆಗೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. 

Home add -Advt

ಬೆಂಗಳೂರು ನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಕರ್ನಾಟಕದಲ್ಲಿ ಅಕ್ಟೋಬರ್ 15ರವರೆಗೆ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button