Kannada NewsKarnataka NewsLatest

ಶುಕ್ರವಾರ ಭಾರೀ ಮಳೆ ನಿರೀಕ್ಷೆ: ಶಾಲೆಗಳಿಗೆ ರಜೆ

ಪ್ರಗತಿವಾಹಿನಿ ಸುದ್ದಿ, ಕಾರವಾರ: ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ನಾಳೆ ಜುಲೈ 7ರಂದು ಕರಾವಳಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

1 ರಿಂದ 12 ತರಗತಿವರೆಗೆ ಎಲ್ಲ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ‌ ಇಲಾಖೆ ನಾಳೆ ಸಹ ಜಿಲ್ಲೆಯಲ್ಲಿ ರೆಡ್ ಅಲರ್ಟ‌‌ ಘೋಷಣೆ ಮಾಡಿದ್ದು,‌‌ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಈ ಹಿನ್ನೆಯಲ್ಲಿ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕಿನಲ್ಲಿ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದೆ.

ಇಂದು ಸಹ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗಿದ್ದು, ಕಾರವಾರದಿಂದ ಭಟ್ಕಳದವರಿನ ಅನೇಕ‌ ಕಡೆಯಲ್ಲಿ ಜಲಾವೃತವಾಗಿದೆ. ನಾಳೆ ಕೂಡಾ ಭಾರೀ ಗಾಳಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.

ಇಂದು ಬೆಳಿಗ್ಗೆ ನಂತರಲ್ಲಿ ರಜೆ ಘೋಷಣೆ‌ ಮಾಡಿದೆ. ಹೀಗಾಗಿ ಜಿಲ್ಲಾಡಳಿತ ‌ರಜೆ ಘೋಷಣೆ ಮಾಡುವ ಮೊದಲೇ ಗ್ರಾಮೀಣ ಪ್ರದೇಶದ ಅನೇಕ ವಿದ್ಯಾರ್ಥಿಗಳು ಶಾಲೆಗೆ ತೆರಳಿದ್ದು, ರಜೆ ಘೋಷಣೆ ಆದ ಬಳಿಕ ವಾಪಸ್ ಮನೆಗೆ ಬರುವಷ್ಟರಲ್ಲಿ ಹಲವು ಕಡೆಯಲ್ಲಿ ಜಲಾವೃತವಾಗಿ ವಿದ್ಯಾರ್ಥಿಗಳು ಪರದಾಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button