Belagavi NewsBelgaum NewsKannada NewsKarnataka NewsNational

*ಮುಂದಿನ ಮೂರು ದಿನ ಭಾರೀ ಮಳೆ: ಎಲ್ಲೆಲ್ಲಿ ಅಲರ್ಟ್ ಘೋಷಣೆ..?* 

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡು ಸೇರಿದಂತೆ ಅನೇಕ ಕಡೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆ ಮತ್ತಷ್ಟು ಹೆಚ್ಚಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಕರಾವಳಿ, ಮಲೆನಾಡು, ಕೊಡಗುಗಳಲ್ಲಿ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಜನಜೀವನ ಹೈರಾಣಾಗಿದೆ. ರಸ್ತೆ ಸಂಪರ್ಕಗಳು ವ್ಯತ್ಯಯಗೊಂಡಿವೆ. ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬೆಂಗಳೂರು-ಮಂಗಳೂರು ಹೆದ್ದಾರಿಗಳಲ್ಲಿ ಸಂಚಾರ ವ್ಯತ್ಯಯಗೊಂಡಿದೆ. ರಾಜ್ಯದ ಇತರ ಕಡೆಗಳಲ್ಲೂ ಉತ್ತಮ ಮಳೆಯಾಗುತ್ತಿದೆ.

------WebKitFormBoundaryEnEhUoRLS����

Related Articles

Back to top button