ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ ಕಳೆದ 3 ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ಶನಿವಾರವೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಶುಕ್ರವಾರ ಮಾರ್ಕಂಡೇಯ ನದಿಯಲ್ಲಿ ರೈತನೋರ್ವ ಕೊಚ್ಚಿಹೋಗಿದ್ದು ಶೋಧ ಕಾರ್ಯ ನಡೆದಿದೆ.
ಬುಧವಾರ ರಾತ್ರಿಯಿಂದಲೇ ಬೆಳಗಾವಿ ಜಿಲ್ಲೆ ಮತ್ತು ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿದ್ದರಿಂದ ಬೆಳಗಾವಿ ಜಿಲ್ಲೆಯ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಎಲ್ಲೆಡೆ ಆತಂಕದ ವಾತಾವರಣ ಉಂಟಾಗಿದೆ.
ಶುಕ್ರವಾರ ಮಧ್ಯಾಹ್ನ ನಂತರ ಸ್ವಲ್ಪಮಟ್ಟಿಗೆ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆದರೆ ಶನಿವಾರ ಮತ್ತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ.
ಶುಕ್ರವಾರ ಸಂಜೆ ಕಾಕತಿಯಲ್ಲಿ ರೈತನೋರ್ವ ಮಾರ್ಕಂಡೇಯ ನದಿ ನೀರಿನ ರಭಸಕ್ಕೆ ತೇಲಿ ಹೋಗಿದ್ದಾನೆ. ಸಿದ್ರಾಯಿ ಸುತಗಟ್ಟಿ (62) ಕೊಚ್ಚಿಹೋಗಿದ್ದು ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ್ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಶೋಧ ಕಾರ್ಯ ನಡೆಸಿದರು. ಆದರೆ ರೈತನ ಪತ್ತೆಯಾಗಿಲ್ಲ. ಶನಿವಾರ ಬೆಳಗ್ಗೆ ಶೋಧ ಕಾರ್ಯ ಮುಂದುವರಿಯಲಿದೆ.
ಈ ಮಧ್ಯೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ನದಿ ತೀರಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ತುರ್ತುಸ್ಥಿತಿ ನಿರ್ವಹಣೆಗೆ ಜಿಲ್ಲಾಡಳಿತ ಸಿದ್ಧತೆ
20 ಜಿಲ್ಲೆಗಳ ಜೊತೆ ನಾಳೆ ಸಿಎಂ ಯಡಿಯೂರಪ್ಪ ವಿಡೀಯೋ ಸಂವಾದ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ