Kannada NewsKarnataka News

ಏ.19ರವರೆಗೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಶುರುವಾಗಿದ್ದು, ಏ.19ರ ವರೆಗೆ ಜೋರಾದ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.‌

ಏಪ್ರಿಲ್‌ ಮೊದಲ ವಾರದಲ್ಲಿ ಕೆಲವು ಜಿಲ್ಲೆಗಳಲ್ಲಿ ಮಳೆಯಾದರೆ, ಎರಡನೇ ವಾರ ಬೆಂಗಳೂರು, ಚಾಮರಾಜನಗರ ಜಿಲ್ಲೆಗಳನ್ನು ಹೊರತುಪಡಿಸಿ ಬಹುತೇಕ ಭಾಗಗಳಲ್ಲಿ ಮಳೆರಾಯ ತಂಪೆರೆದಿದ್ದಾನೆ. ಏ. 19ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆ ಬೀಳುವ ನಿರೀಕ್ಷೆಯಿದೆ. ಏ. 19ರ ಬಳಿಕ  ಬೆಂಗಳೂರಿನಲ್ಲಿ  ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.‌

Home add -Advt

ಏ. 17 ರ ವರೆಗೆ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಏಪ್ರಿಲ್  18 ಹಾಗೂ 19ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.‌

https://pragativahini.com/%e0%b2%ac%e0%b2%b3%e0%b2%97%e0%b2%b5%e0%b2%af%e0%b2%b2%e0%b2%b2-16-%e0%b2%b2%e0%b2%95%e0%b2%b7%e0%b2%95%e0%b2%95-%e0%b2%b9%e0%b2%9a%e0%b2%9a-%e0%b2%b9%e0%b2%a3-%e0%b2%9c%e0%b2%aa%e0%b2%a4

Related Articles

Back to top button