
ಪ್ರಗತಿವಾಹಿನಿ ಸುದ್ದಿ : ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಕೆಲವು ಜಿಲ್ಲೆಗಳಲ್ಲಿ ವರುಣ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಮಳೆ ಅಬ್ಬರಕ್ಕೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಪ್ರಮುಖವಾಗಿ ಮಲೆನಾಡಿನಲ್ಲಿ ಮಳೆ ಅಬ್ಬರಕ್ಕೆ ಜನ ಕಂಗಾಲಾಗಿದ್ದು, ಭಾರಿ ಮಳೆಯ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗಳಿಗೆ ರಜೆ ನೀಡಲಾಗಿದೆ.
ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ NR.ಪುರ ತಾಲೂಕಿನಲ್ಲಿ ರಜೆ ಇದೆ. ಅಲ್ಲದೆ, ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಜೋಯಿಡಾ, ಸಿದ್ದಾಪುರ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ವ್ಯಾಪ್ತಿಯ ಶಾಲೆ, ಕಾಲೇಜುಗಳಿಗೆ ಹಾಗೂ ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ ತಾಲೂಕಿನಾದ್ಯಂತ ಮಳೆ ಕಾರಣಕ್ಕೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.