Belagavi NewsBelgaum NewsKannada NewsKarnataka NewsNationalPolitics

*ಮಳೆ ಅಬ್ಬರ: ಈ ಮೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮೂರು ದಿನಗಳ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ

ಬಂಗಾಳಕೊಲ್ಲಿ ಸಮುದ್ರ ಭಾಗದಲ್ಲಿ ಆದ ವೈಪರೀತ್ಯದ ತೀವ್ರತೆ ಪರಿಣಾಮ ಹವಾಮಾನ ಬದಲಾವಣೆ ಆಗಿದೆ. ಹೀಗಾಗಿ

ಇಂದಿನಿಂದ ಜೂನ್ 7ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದಲೇ ವರುಣ ಅಬ್ಬರಿಸುತ್ತಿದ್ದಾನೆ. ಈ ಹಿನ್ನಲೆ ಮೂರು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದರೆ, ಕೊಡಗಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಕೂಡ ಪ್ರಾಥಮಿಕ ಹಾಗು ಪ್ರೌಢ ಶಾಲೆಗಳಿಗೆ ರಜೆ ಘೋಷನೆ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button