
ಪ್ರಗತಿವಾಹಿನಿ ಸುದ್ದಿ; ರಾಜ್ಯದ ಹದಿನಾಲ್ಕು ಜಿಲ್ಲೆಗಳಲ್ಲಿ ಜುಲೈ 17 ರಿಂದ ಜುಲೈ 22ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇವುಗಳಲ್ಲಿ ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಇನ್ನುಳಿದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯ ಪ್ರಕಾರ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಅದೇ ರೀತಿ, ಮೈಸೂರು, ಮಂಡ್ಯ ಶಿವಮೊಗ್ಗ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಿರುವ ಹಿನ್ನಲೆ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಆದೇಶಿಸಿದೆ.