
ಪ್ರಗತಿವಾಹಿನಿ ಸುದ್ದಿ: ಮುಂದಿನ 4 ದಿನ ಬೆಳಗಾವಿ ಸೇರಿದಂತೆ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುಂಗಾರು ಆರಂಭವಾದ ಬಳಿಕ ಅಲ್ಲಲ್ಲಿ ಮಳೆಯಾಗಿದ್ದರೂ ಕೂಡ ಬಿಟ್ಟೂ ಬಿಡದೆ ಮಳೆ ಸುರಿಯುತ್ತಿಲ್ಲ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ನಿರೀಕ್ಷೆ ಇದೆ.
ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ ಮಳೆ ಸುರಿಯಲಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ