ಬೆಳಗಾವಿಯಲ್ಲೂ ಭಾರೀ ಮಳೆ: 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಸೋಮವಾರ ಬೆಳಗಿನ ಜಾವ ಭಾರೀ ಮಳೆಯಾಗಿದೆ. ಮುಂಗಾರು ಆರಂಭದಲ್ಲಿ ಮಳೆ ಸುರಿದ ಹಾಗೆ ಗುಡುಗು ಸಹಿತ, ದಟ್ಟ ಮೋಡ ಕವಿದು ಮಳೆ ಸುರಿದಿದೆ. ಮಳೆಯಿಂದಾಗಿ ರೈತರಲ್ಲಿ ಆತಂಕ ಹೆಚ್ಚಿದೆ. ಬೆಳೆದು ನಿಂತ ಬೆಳೆಗಳಿಗೆ ಹಾನಿಯಾಗುವ ಆತಂಕ ಮೂಡಿದೆ.
ಬೆಳಗಾವಿ ಸೇರಿದಂತೆ ರಾಜ್ಯದ 13 ಜಿಲ್ಲೆಗಳಿಗೆ ಸೋಮವಾರ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಉತ್ತರಕನ್ನಡ, ಉಡುಪಿ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳವಾರ ಕೂಡ ರಾಜ್ಯದ 8 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅ.26ರ ವರೆಗೂ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿಯಲ್ಲಿ ಗಂಟೆಗೆ 35ರಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದಿರುವಂತೆ ಮೀನುಗಾರರಿಗೆ ತಿಳಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ