
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾನುವಾರ ಸಂಜೆ ಭಾರಿ ಪ್ರಮಾಣದಲ್ಲಿ ಮಳೆ ಅಬ್ಬರಿಸಿದೆ.
4 ಗಂಟೆ ಹೊತ್ತಿಗೆ ಶುರುವಾದ ಮಳೆ ಸಂಜೆ ಬಹುಹೊತ್ತಿನವರೆಗೂ ಮುಂದುವರಿದಿತ್ತು. ಗುಡುಗು ಹಾಗೂ ಭಾರಿ ಪ್ರಮಾಣದಲ್ಲಿ ಗಾಳಿಯೊಂದಿಗೆ ಮಳೆ ಅಬ್ಬರಿಸಿದೆ. ಅನಿರೀಕ್ಷಿತ ಮಳೆಯಿಂದಾಗಿ ಜನಜೀವನ, ವಾಹನ ಸಂಚಾರ ಅಸ್ತವ್ಯಸ್ತವಾಯಿತು.
ಭಾನುವಾರ ಇಡೀ ದಿನ ಬೆಳಗಾವಿ ನಗರದಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗಿತ್ತು. ಇದರಿಂದಾಗಿ ನಗರದ ಜನರು ಪರದಾಡುವಂತಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ