ಪ್ರಗತಿವಾಹಿನಿ ಸುದ್ದಿ, ಗೋಕಾಕ:
ಗೋಕಾಕ ತಾಲೂಕಲ್ಲಿ ಇಂದು ಸಂಜೆ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ.
ಗಾಳಿ ಸಹಿತ ಅಬ್ಬರದ ಮಳೆಯಿಂದಾಗಿ ಮರಡಿಮಠ -ಕೊಣ್ಣೂರು ರಸ್ತೆಯ ಮಲೆ ಬೃಹತ್ ಆಲದ ಮರ ಬಿದ್ದಿದೆ. ಇದರಿಂದಾಗಿ ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ತೆರವು ಕಾರ್ಯದಲ್ಲಿ ತೊಡಗಿದ್ದಾರೆ.
ಭಾರಿ ಮಳೆಯಿಂದ ತಾಲೂಕಿನ ಹಲವೆಡೆ ಹಾನಿಯಾಗಿದೆ. ಸಂಚಾರ ವ್ಯವಸ್ಥೆ ಕೂಡ ಅಸ್ತವ್ಯಸ್ತವಾಗಿದೆ.