Belagavi NewsBelgaum NewsKannada NewsKarnataka NewsNational

*ಬೆಳಗಾವಿ ಸೇರಿದಂತೆ ಹಲವೆಡೆ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ಇಂದು ಉಡುಪಿ ಮತ್ತು ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.‌ ಆಗಸ್ಟ್‌ 27 ರಂದು ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ

Home add -Advt

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.‌

Related Articles

Back to top button