Belagavi NewsBelgaum NewsKannada NewsKarnataka NewsNational

*ಮುಂದಿನ 24 ಗಂಟೆ ಭರ್ಜರಿ ಮಳೆ: ಹಲವೆಡೆ ಹೈಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 24 ಗಂಟೆ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗುತ್ತಿದೆ. ಕರಾವಳಿ ಒಳನಾಡಿನಲ್ಲಿ ಮಾರುತದ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಕರಾವಳಿಯಲ್ಲಿ ಮಳೆಯಾಗಲಿದೆ.

Home add -Advt

ಮುಂದಿನ 24 ಗಂಟೆಗಳ ಕಾಲ ರಾಜ್ಯದೆಲ್ಲೆಡೆ ಮಳೆಯ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲೂ ಭಾರೀ ಮಳೆಯಾಗಲಿದೆ. ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.

Related Articles

Back to top button