*ಮುಂದಿನ 24 ಗಂಟೆ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ ಮಳೆಯ ಅಬ್ಬರ ಹೆಚ್ಚುತ್ತಿದ್ದು, ಕೆಲವೆಡೆ ದಿನದಿಂದ ದಿನಕ್ಕೆ ಮಳೆಯಾರ್ಭಟ ತುಸು ಕಡಿಮೆಯಾಗುತ್ತಿದೆ. ಸದ್ಯ ಕೇರಳ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದೆ.
ಇಂದು ಕರ್ನಾಟಕ ರಾಜ್ಯದಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅಗತ್ಯ ಮುನ್ನಚ್ಚರಿಕೆ ವಹಿಸಿಕೊಳ್ಳುವಂತೆ ಹವಾಮಾನ ತಜ್ಞರು ಸೂಚನೆ ನೀಡಿದ್ದಾರೆ
ಪೂರ್ವ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಾರ್ಖಂಡ್, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ ಮತ್ತು ಮಾಹೆ ಮತ್ತು ಲಕ್ಷದ್ವೀಪದ ಗಂಗಾ ಬಯಲು ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಈ ಎಲ್ಲಾ ರಾಜ್ಯಗಳಲ್ಲಿ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ.
ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಬಿಹಾರ, ಒಡಿಶಾ, ಅಸ್ಸಾಂ, ಮೇಘಾಲಯದಲ್ಲಿ ಮಳೆಯಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ