Belagavi NewsBelgaum NewsKarnataka News

*ಏ.30 ವರೆಗೆ ಬೆಳಗಾವಿ ಸೇರಿದಂತೆ 20 ಕ್ಕೂ ಜಿಲ್ಲೆಗಳಲ್ಲಿ ಅಧಿಕ ಮಳೆ*

ಪ್ರಗತಿವಾಹಿನಿ ಸುದ್ದಿ: ಏಪ್ರಿಲ್ 30 ರವರೆಗೆ ರಾಜ್ಯದ ವಿವಿಧೆಡೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೇಸಿಗೆ ಮಳೆ ನಾಳೆ ಭಾನುವಾರದಿಂದ ಮತ್ತೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಬಾರಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಕಳೆದ 4-5 ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿತ್ತು. ಇದೀಗ ಮತ್ತೆ ಮಳೆ ಆರಂಭದ ಲಕ್ಷಣಗಳಿದ್ದು, ಭಾನುವಾರದಿಂದ ಮಳೆ ಸುರಿಯಲಿದೆ.

Home add -Advt

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಹಾಸನ, ದಾವಣಗೆರೆ, ವಿಜಯನಗರ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ.

Related Articles

Back to top button