ಪ್ರಗತಿವಾಹಿನಿ ಸುದ್ದಿ: ಮುಂದಿನ 7 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಪೂರ್ವ ಅರಬ್ಬೀ ಸಮುದ್ರ ತೀರದಲ್ಲಿ ತೀವ್ರವಾಗಿ ವಾಯುಭಾರ ಕುಸಿತವಾಗಿದ್ದು ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ. ಇನ್ನು ಹಾವೇರಿ, ಇಳಕಲ್ ಮತ್ತು ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಿದೆ.
ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರುದಿನಗಳವರೆಗೆ ಹಲವು ಕಡೆ ಮಳೆ ಸಾಧ್ಯತೆಯಿದೆ. ಇನ್ನು ಅಕ್ಟೋಬರ್16 ರಿಂದ 18ರವರೆಗೆ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗಲಿದೆ.
ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಅಕ್ಟೋಬರ್ 16, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ