ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ತಿಳಿಸಿದೆ.
ಮುಖ್ಯವಾಗಿ ಒಣ ಹವೆಯ ಸಾಧ್ಯತೆಯಿದ್ದು, ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಬೆಂಗಳೂರಿನಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ವರದಿ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ