ಪ್ರಗತಿವಾಹಿನಿ ಸುದ್ದಿ : ಕಳೆದೊಂದು ವಾರದಿಂದ ಅಬ್ಬರಿಸುತ್ತಿರುವ ಆರ್ಭಟಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಅಕ್ಷರಶಃ ನಲುಗಿ ಹೋಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಕೋಲಾರ ಹಾಸನ, ಮಂಡ್ಯ ಚಾಮರಾಜನಗರ, ಕೊಡಗು, ರಾಮನಗರ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ, ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗಿರಲಿದೆ.
ಇನ್ನು ತಾಪಮಾನವನ್ನು ನೋಡುವುದಾದರೆ, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ