Kannada NewsKarnataka NewsLatest

*ಗೋದಾಮಿನಲ್ಲಿ ಬೆಂಕಿ ಅವಘಡ; ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಗಾಯತ್ರಿ ಅಸೋಸಿಯೇಟ್ಸ್ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Home add -Advt

ಇಂದು ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡ ತುಂಬ ವ್ಯಾಪಿಸಿದೆ. ಅಗ್ನಿಶಮಕ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಗೋದಾಮಿನಲ್ಲಿ ಡಿ ಮಾರ್ಟ್ ಸೇರಿದಂತೆ ಪ್ರತಿಷ್ಠಿತ ಸೂಪರ್ ಮಾರ್ಕೆಟ್ ಗಳಿಗೆ ಸಾಗಿಸುವ ವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು. ಬೆಂಕಿ ಅವಘಡದಲ್ಲಿ ಕೋಟ್ಯಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

Related Articles

Back to top button