Kannada NewsKarnataka NewsLatest
ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಭಾರಿ ಮಳೆ ಮುನ್ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕರ್ನಾಟಕದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಆ.29ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ್ದು, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.




