Belagavi NewsBelgaum NewsKannada NewsKarnataka News
ಮೇ 15ರವರೆ ಬೆಳಗಾವಿ ಸೇರಿದಂತೆ ಹಲವಡೆ ಮಳೆ ಸಾಧ್ಯತೆ

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮೇ 15ರವರೆಗೂ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಗದಗ, ಧಾರವಾಡ, ಹಾವೇರಿ, ಜಿಲ್ಲೆಗಳಲ್ಲಿ ಭಾನುವಾರ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಜೊತೆಗೆ ಬೆಂಗಳೂರಿನಲ್ಲಿ ಮುಂದಿನ 5 ದಿನಗಳವರೆಗೆ ಗುಡುಗು, ಮಿಂಚು, ಬಿರುಗಾಳಿಸಹಿತ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಭಾನುವಾರ ಶಿವಮೊಗ್ಗ, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಹಾಗೂ ಮೇ 13ರಂದು ಉಡುಪಿ, ದಕ್ಷಿಣ ಕನ್ನಡ, ಕಲಬುರಗಿ, ರಾಯಚೂರು, ಯಾದಗಿರಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.




