Belagavi NewsBelgaum NewsKannada NewsKarnataka News

ಬೆಳಗಾವಿ ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಯೆಲ್ಲೊ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಬೆಳಗಾವಿಯಲ್ಲಿ ಬಿಸಿಲಿಗೆ ಕಂಗಾಲಾದ ಜನರಿಗೆ ಇಂದು ನಾಳೆ ಮಳೆ ಆಗುವ ಸಾದ್ಯತೆ ಇದೆ ಎಂದು ಹವಾಮಾನ್ ಇಲಾಖೆ ಗುಡ್ ನ್ಯೂಸ್ ನೀಡಿದೆ. ಜೊತೆಗೆ ಬೆಳಗಾವಿ ಸೇರಿದಂತೆ ಏಳು ಜಿಲ್ಲೆಗಳಲ್ಲಿ ಮಳೆ ಆಗುವ ಸಾದ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.‌

ವಿಜಯಪುರ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗೆ ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಬಿರುಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. 

Home add -Advt

ಕೆಲ ಜಿಲ್ಲೆಗಳಲ್ಲಿ ಮಳೆಯ ಜತೆಗೆ ಬಿಸಿಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯೂ ಇದೆ. ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಂಭವವಿದೆ ಎಂದು ಹೇಳಿದೆ.

Related Articles

Back to top button