Belagavi NewsBelgaum NewsKannada NewsKarnataka News

*ಇಂದು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದು ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಮಳೆಯಾಗಲಿದ್ದು, ಕಡಲತೀರ ಪ್ರದೇಶಗಳಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದೆ. ಹೀಗಾಗಿ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಇಲಾಖೆ ಎಚ್ಚರಿಸಿದೆ.

Home add -Advt

ಇನ್ನೊಂದೆಡೆ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಹಾಗೂ ಕೆಲವು ಕಡೆಗಳಲ್ಲಿ ಸುರಿಯುವ ಭಾರೀ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಕಲ್ಬುರ್ಗಿ ಸೇರಿದಂತೆ ಉತ್ತರ ಕರ್ನಾಟಕದ ಭಾಗಗಳಲ್ಲಿ ಹಾಗೂ ಶಿವಮೊಗ್ಗ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ಮಲೆನಾಡು ಭಾಗಗಳಲ್ಲಿ ಮಳೆಯ ಆರ್ಭಟ ಹೆಚ್ಚಿರಲಿದೆ.

ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

Related Articles

Back to top button