Kannada NewsKarnataka NewsLatest

*ಭಾರೀ ಮಳೆ ಸಾಧ್ಯತೆ: 11 ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಭಾರೀ ಮಳೆಯ ಸಾಧ್ಯತೆಯಿರುವ ಕಾರಣ ರಾಜ್ಯದ 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಆರೆಂಜ್ಲ ಅಲರ್ಟ್ ಘೋಷಿಸಲಾಗಿದೆ.‌

Home add -Advt

ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಬಳ್ಳಾರಿ, ಉಡುಪಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ  ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿಸಿಲು ಮತ್ತು ಮೋಡದ ವಾತಾವರಣವಿರುತ್ತದೆ. ಮಧ್ಯಾಹ್ನ ನಂತರ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಘಟ್ಟ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಕಾಣಿಸುತ್ತಿದೆ.

ಉತ್ತರ ಹಿಂದೂ ಮಹಾಸಾಗರ ಮತ್ತು ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳಿಗೆ ಪೂರಕ ವಾತಾವರಣ ಇಲ್ಲದಿರುವುದರಿಂದ ಮುಂಗಾರು ಮುಂದುವರಿಕೆಗೆ ಅಡ್ಡಿಯಾಗಿದೆ. ಮೇ 30ರ ಸುಮಾರಿಗೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳು ಕ್ಷೀಣಿಸುತ್ತಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button