Belagavi NewsBelgaum NewsKannada NewsKarnataka NewsNational

*ಭಾರಿ ಮಳೆ: 2 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ 2 ಜಿಲ್ಲೆಗಳಿಗೆ ಆರೆಂಜ್ ಮತ್ತು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಭಾರಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.

ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಚಂಡಮಾರುತಗಳು ಮತ್ತಷ್ಟು ಚುರುಕಾಗಿದ್ದು, ಇದರ ಪ್ರಭಾವದಿಂದ ಒಳನಾಡಿನಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದೆ. ಮುಂದಿನ 24 ಗಂಟೆಗಳ ಕಾಲ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. 

Home add -Advt

ಕರಾವಳಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರಲ್ಲಿ ಮಳೆ ಅವಾಂತರ ಸೃಷ್ಠಿಸಿದ್ದು, ಕಳೆದ 4-5 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತಗ್ಗುಪ್ರದೇಶಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ. ಇನ್ನೂ 2 ದಿನ ಮಳೆ ಆಗುವ ಮುನ್ಸೂಚನೆ ಸಿಕ್ಕಿದ್ದು, ರಾಜಧಾನಿಯ ಜನರನ್ನು ಮಳೆರಾಯ ಕಾಡಲಿದ್ದಾನೆ.

Related Articles

Back to top button