ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಮುಂಗಾರು ಆರಂಭ ಆಗಿದ್ದು ಜೂನ್ 9 ರವರೆಗೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರಾವಳಿಯ ಉತ್ತರ ಕನ್ನಡದಲ್ಲಿ ಭಾರಿ ಗುಡುಗು ಸಹಿತ ಮಳೆಯಾಗಲಿದೆ. ಚಿತ್ರದುರ್ಗ, ತುಮಕೂರು, ದಾವಣಗೆರೆ ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಹಾಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ
ಪುತ್ತೂರು, ಶಿರಹಟ್ಟಿ, ಉಪ್ಪಿನಂಗಡಿ, ಗುಂಡ್ಲುಪೇಟೆ, ಗೋಕರ್ಣ, ಚನ್ನಪಟ್ಟಣ. ಕುಮಟಾ, ಹರಪನಹಳ್ಳಿ, ಕದ್ರಾ, ಧರ್ಮಸ್ಥಳ, ಮಾಣಿ, ಕಾರವಾರ, ಕುಂದಗೋಳ, ಬೆಳ್ಳಟ್ಟಿ, ಸೋಮವಾರಪೇಟೆ, ಅಂಕೋಲಾ, ಹೊನ್ನಾವರ, ಹಾರಂಗಿ, ಎಚ್ಡಿ ಕೋಟೆ, ಹುಂಚದಕಟ್ಟೆ, ಕಳಸ, ಬೆಳ್ತಂಗಡಿ, ಸಿದ್ದಾಪುರ, ಸವಣೂರು, ಶಿಗ್ಗಾಂವ್, ಪೊನ್ನಂಪೇಟೆ, ನಾಪೋಕ್ಲು, ಭಾಗಮಂಡಲದಲ್ಲಿ ಸಾಧಾರಣ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜಲಾಶಯಗಳ ಒಳಹರಿವು ಹೆಚ್ಚಳ – ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರಿಸುತ್ತಿರುವುದರಿಂದ ನದಿಗಳಿಗೆ ನೀರು ಹರಿದು ಬರುತ್ತಿದೆ. ಇದರಿಂದ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ನೀರಿಲ್ಲದೆ ಪರದಾಡುತ್ತಿದ್ದ ಪ್ರದೇಶದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಕೃಷಿ ಚಟುವಟಿಕೆಗಳು ಆರಂಭವಾಗಿವೆ. ಕೆಆರ್ಎಸ್, ಕಬಿನಿ, ಘಟಪ್ರಭಾ ಜಲಾಶಯಗಳಲ್ಲಿ ಒಳಹರಿವು ಹೆಚ್ಚಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ