Belagavi NewsBelgaum NewsKannada NewsKarnataka News

*ಇಂದು ನಾಳೆ ಭಾರಿ ಮಳೆ: ಅಲರ್ಟ್ ಜಾರಿ ಮಾಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ  ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. 

Home add -Advt

ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ಲಕ್ಷಣಗಳಿವೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಯಲ್ಲಿ ಮಳೆ ಬಿಳಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

Related Articles

Back to top button